ನೇಸರ ಆ.02: ಸರಕಾರದಿಂದ ನಡೆಸಲ್ಪಡುವ ಓದುವ ಬೆಳಕು ಕಾರ್ಯಕ್ರಮದಡಿ, ವಿಶ್ವ ಚದುರಂಗ ದಿನದ ಅಂಗವಾಗಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು.
ಇದರ ಮೊದಲ ಹಂತದ ಶಾಲಾ ಮಟ್ಟದ ಸ್ಪರ್ಧೆಯಲ್ಲಿ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳು ಗ್ರಾಮ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ವಿದ್ಯಾಸಂಸ್ಥೆಯ 9ನೇ ತರಗತಿಯ ಸುನೀತ್ ಪ್ರಥಮ ಸ್ಥಾನ, 10ನೇ ತರಗತಿಯ ಪ್ರಸಾದ್ ದ್ವಿತೀಯ ಸ್ಥಾನ ಹಾಗೂ 10ನೇ ತರಗತಿಯ ಧನುಷ್ ತೃತೀಯ ಸ್ಥಾನ ಪಡೆದಿದ್ದಾರೆ.
ಸ್ಪರ್ಧೆಯನ್ನು ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಪಟ್ರಮೆ ಗ್ರಂಥಾಲಯ ಮೇಲ್ವಿಚಾರಕಿ ವಿದ್ಯಾ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಸ್ವಾಗತಿಸಿ, ಚೆಸ್ ಪಂದ್ಯಾಟದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು. ಒಟ್ಟು 28 ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.