ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ NSS ಸೇವಕರಿಂದ ಪ್ರತಿ ಮನೆಗೆ ರಾಷ್ಟ್ರಧ್ವಜ ಮಾಹಿತಿ

ಶೇರ್ ಮಾಡಿ

ನೇಸರ ಆ.09: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 150 ಸ್ವಯಂ ಸೇವಕರು ಇಪ್ಪತ್ತೆಂಟು ತಂಡಗಳ ಮೂಲಕ ಸ್ವಾತಂತ್ಯ್ರದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಉಜಿರೆಯ ಪ್ರತಿ ಮನೆಗೆ ರಾಷ್ಟ್ರಧ್ವಜ ಹಾಗೂ ಸ್ವಾತಂತ್ಯ್ರದ ಅಮೃತ ಮಹೋತ್ಸವ ವರ್ಷಾಚರಣೆ ಬಗ್ಗೆ ಮಾಹಿತಿ ನೀಡಿದರು.

ರಾಷ್ಟ್ರಧ್ವಜದ ಮಹತ್ವ, ಆ 13 ರಿಂದ 15 ರ ತನಕ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಾಟ ಹಾಗೆಯೇ ಪರಿಸರ ಸ್ವಚ್ಛತೆ ಬಗ್ಗೆ ಪ್ರಾಚಾರ್ಯ ಪ್ರೊ.ದಿನೇಶ ಚೌಟ ಅವರ ನಿರ್ದೇಶನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಹಾಗೆಯೇ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಇವರ ಮಾರ್ಗದರ್ಶನದಲ್ಲಿ ಮಾಹಿತಿಗಳನ್ನು ನೀಡಿದರು.

Leave a Reply

error: Content is protected !!