ಜೋಯಾಲುಕ್ಕಾಸ್ ಫೌಂಡೇಷನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ-ಶಾಸಕ ರಘುಪತಿ ಭಟ್ ಉದ್ಘಾಟನೆ

ಶೇರ್ ಮಾಡಿ

ನೇಸರ ಆ.10: ಜೋಯಾಲುಕ್ಕಾಸ್ ಫೌಂಡೇಷನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದು,  ದಿನಾಂಕ 09-08-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೋಯಾಲುಕ್ಕಾಸ್ ಫೌಂಡೇಷನ್ ರೀಜನಲ್ ಮ್ಯಾನೇಜರ್ ಜಿನೇಶ್ ವಿ ಯಸ್ , ಅಸಿಸ್ಟೆಂಟ್ ಮ್ಯಾನೇಜರ್ ವಿವೇಕ್ ನಾಯರ್ , ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!