ಕಡಬ:ಪೊಲೀಸ್ ಠಾಣೆಯಲ್ಲಿ ಕೃಷ್ಣಾಷ್ಟಮಿ ಸಮಿತಿ ಪ್ರಮುಖರ ಸಭೆ

ಶೇರ್ ಮಾಡಿ

ನೇಸರ ಆ.11: ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಠಾಣಾ ವ್ಯಾಪ್ತಿಯ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣಾ ಸಮಿತಿಯ ಪದಾಧಿಕಾರಿಗಳ ಸಭೆಯು ಕಡಬ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ ಇತ್ತೀಚಿನ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಅನಪೇಕ್ಷಿತ ಘಟನೆಗಳ ಹಿನ್ನೆಲೆಯಲ್ಲಿ ಹಬ್ಬದ ಆಚರಣೆಯನ್ನು ಯಾವುದೇ ಗೊಂದಲಗಳು ನಡೆಯದೆ ಶಾಂತಿಯುತವಾಗಿ ಮಾಡುವ ಉದ್ದೇಶದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣಾ ಸಮಿತಿಯ ಪದಾಧಿಕಾರಿಗಳ ಸಭೆ ಏರ್ಪಡಿಸಲಾಗಿದೆ. ಯಾವುದೇ ಸಂದರ್ಭಗಳಲ್ಲಿಯೂ ಸಮಾಜದಲ್ಲಿ ಸಾಮರಸ್ಯವನ್ನು ಕೆಡಿಸುವ ಸನ್ನಿವೇಶಳಿಗೆ ಅವಕಾಶ ನೀಡಬಾರದು. ಗೊಂದಲಗಳು ಎದುರಾದರೆ ಕಾನೂನನ್ನು ಕೈಗೆತ್ತಿಕೊಳ್ಳದೆ ಪೊಲೀಸರ ಸಹಾಯ ಪಡೆದು ಅದನ್ನು ಶಾಂತಿಯುತವಾಗಿ ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಸಮಿತಿಯವರು ಸರಕಾರ ರೂಪಿಸಿರುವ ನಿಯಮಾವಳಿಗಳ ಪ್ರಕಾರ ಹಬ್ಬವನ್ನು ಆಚರಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಸೂಚಿಸಿದರು.
ಠಾಣಾ ವ್ಯಾಪ್ತಿಯ ವಿವಿಧ ಭಾಗಗಳ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಆಚರಣ ಸಮಿತಿಯ ಪ್ರಮುಖರಾದ ಸತೀಶ್ ಎರ್ಕ ಬಿಳಿನೆಲೆ, ರವೀಂದ್ರ ದಾಸ್, ಜಿನಿತ್ ಶೆಟ್ಟಿ ಮರ್ದಾಳ, ಜಯರಾಮ, ನವೀನ್ ಕೆ., ಸಂತೋಷ್ ಆಲಂಕಾರು, ಮಲ್ಲೇಶ್ ಆಲಂಕಾರು, ಹರೀಶ್ ಆಲಂಕಾರು ಮುಂತಾದವರು ಸಭೆಯಲ್ಲಿ ಹಾಜರಿದ್ದರು.

Leave a Reply

error: Content is protected !!