ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯ ವನ್ನು ಉಳಿಸಿ ಬೆಳೆಸೋಣ – ಕುಮಾರ್.ಕೆ.ಎ

ಶೇರ್ ಮಾಡಿ

ನೇಸರ ಆ.15: ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯ ವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಕುಮಾರ್.ಕೆ.ಎ ಇವರು ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ 76ನೇ ವರ್ಷದ ಸ್ವಾತಂತ್ರ್ಯಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣಗೈದು, ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶಿವಪ್ರಕಾಶ್.ಎಂ, ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ, ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ “ಅಮೃತ ನಡಿಗೆ ದೇಶದ ಕಡೆಗೆ” ಎನ್ನುವ ಧ್ಯೇಯ ವಾಕ್ಯದೊಂದಿಗೆ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಗಳ 8000 ವಿದ್ಯಾರ್ಥಿಗಳ ಜಾಥಾದ ಮೂಲಕ ವಿವೇಕಾನಂದ ವಿದ್ಯಾವರ್ಧಕ ಸಂಘ ವಿನೂತನವಾಗಿ ಹಮ್ಮಿಕೊಂಡಿತ್ತು. ಇಂದು 75ನೇ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ಮುಂದಿನ 25 ವರ್ಷದಲ್ಲಿ ಶತಮಾನೋತ್ಸವನ್ನು ಅಚರಿಸಲಿದ್ದೇವೆ. ಅಖಂಡವಾಗಿದ್ದ ಭಾರತ ಮತ್ತೆ ಭಾಗವಾಗದಿರಲಿ ಎಂದು ಹಾರೈಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವೇಕಾನಂದ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ 75 ಸ್ವಾತಂತ್ರ್ಯ ಹೋರಾಟಗಾರರ ಕುರಿತು ಲೇಖನವನ್ನು ಪುಸ್ತಕದ ಮೂಲಕ ಮುಖ್ಯ ಅತಿಥಿಗಳು ಬಿಡುಗಡೆ ಮಾಡಿದರು.
ವಿವೇಕಾನಂದ ಬಿ.ಎಡ್ ಶಿಕ್ಷಕ ವಿದ್ಯಾರ್ಥಿನಿಯರು ವಂದೇಮಾತರಂ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ಧ್ವಜಗೀತೆಯನ್ನು ಹಾಡಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಶ್ರೀ ರವಿನಾರಾಯಣ.ಎಂ ಸ್ವಾಗತಿಸಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಾಣಿಶ್ರೀ.ಎನ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ದೀಪಕ್ ಇವರು ದೇಶಭಕ್ತಿಯ ಘೋಷಣೆಗಳನ್ನು ಹಾಕಿದರು. ಶಾಲೆಯ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ವಿದ್ಯಾರ್ಥಿಗಳು ಅತಿಥಿಗಳಿಗೆ ಗೌರವ ಸಲ್ಲಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.

NESARA|| WhatsApp ||GROUPS

   
                          

 

  
                                                     

 

Leave a Reply

error: Content is protected !!