
ನೇಸರ ಆ.17: ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಶಾಸಕ ಭೋಜೇ ಗೌಡ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಶಿಕ್ಷಣ ಇಲಾಖೆಯ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.

NESARA|| WhatsApp ||GROUPS |
---|
ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್., ಸಮನ್ವಯಾಧಿಕಾರಿ ಶಂಭು ಶಂಕರ್, ಕರ್ನಾಟಕ ಪ್ರೌಢಶಾಲಾ ಸಹಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಮಹಮ್ಮದ್ ರಿಯಾಜ್, ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ್ ಮಯ್ಯ ಮತ್ತು ಇತರ ಪದಾಧಿಕಾರಿಗಳು ಇದ್ದರು. ಶಿಕ್ಷಕರಿಗೆ ಅಗತ್ಯವಾಗಿರುವ ಗುರು ಭವನ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ಕಾಮಗಾರಿಗೆ ಹೆಚ್ಚಿನ ಅನುದಾನವನ್ನು ಒದಗಿಸಲು ಮನವಿ ನೀಡಲಾಯಿತು.



