ಔಷಧ ವ್ಯಾಪಾರಸ್ಥರಿಗೆ ಹಾಗೂ ಸಿಬ್ಬಂದಿಗಳಿಗೆ ನಿರಂತರ ಕಲಿಕಾ ತರಬೇತಿ

ಶೇರ್ ಮಾಡಿ

ನೇಸರ ಆ.20: ಮಂಗಳೂರು ಉಪ ಔಷಧ ನಿಯಂತ್ರಕರ ಕಛೇರಿ ಹಾಗೂ ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಜಂಟಿ ಆಶ್ರಯದಲ್ಲಿ ತಾಲೂಕಿನ ಔಷಧ ವ್ಯಾಪಾರಸ್ಥರಿಗೆ ಹಾಗೂ ಸಿಬ್ಬಂದಿಗಳಿಗೆ ನಿರಂತರ ಕಲಿಕಾ ಕಾರ್ಯಕ್ರಮದಡಿ ತರಬೇತಿ ಕಾರ್ಯಾಗಾರವು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಜರಗಿತು.

ಸರಕಾರದ ನೂತನ ನೀತಿ, ಇತ್ತೀಚಿನ ಬದಲಾವಣೆಗಳ ಕುರಿತು ಮಂಗಳೂರು ವಲಯದ ಸಹಾಯಕ ಔಷಧ ನಿಯಂತ್ರಣಾಧಿಕಾರಿ ಉದಯ ಕಿಶೋರ್ ಮಾಹಿತಿ ನೀಡಿದರು. ದಕ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸುಜಿತ್ ಭಿಡೆ, ತಾಲೂಕು ಸಂಘದ ಕೋಶಾಧಿಕಾರಿ ಗಣಪತಿ ಭಟ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ಕಾರ್ಯದರ್ಶಿ ರಘುನಾಥ ದಾಮ್ಲೆ ವಂದಿಸಿದರು. ಸದಸ್ಯ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!