ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ

ಶೇರ್ ಮಾಡಿ

ನೇಸರ ಆ.20: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಬೆಂಗಳೂರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2022ನೇ ಸಾಲಿನ ಜಿಲ್ಲಾ ಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆ ಪುತ್ತೂರು ಇಲ್ಲಿ 20-08-2022ರಂದು ನಡೆಯಿತು.

ಜಿಲ್ಲೆಯಾದ್ಯಾಂತದ 87 ಪ್ರೌಢ ಶಾಲಾ ತಂಡಗಳು ಭಾಗವಹಿಸಿದ್ದು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ ಎನ್, 10ನೇ ತರಗತಿ[ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮೀ.ಎ ದಂಪತಿ ಪುತ್ರ] ಹಾಗೂ ಧಾತ್ರಿ ಸಿ.ಹೆಚ್, 10ನೇ ತರಗತಿ[ದಿನೇಶ್.ಸಿ.ಎಚ್ ಮತ್ತು ಪದ್ಮಲಕ್ಷ್ಮಿ ದಂಪತಿ ಪುತ್ರಿ] ಅವರನ್ನೊಳಗೊಂಡ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಈ ತಂಡವು ಡಿ.ಡಿ.ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ‘ಥಟ್ ಅಂತ ಹೇಳಿ’ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನವು ಪ್ರಶಸ್ತಿ ಪತ್ರ ಹಾಗೂ ರೂಪಾಯಿ 3000 ನಗದನ್ನು ಒಳಗೊಂಡಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

error: Content is protected !!