ಅರಂತೋಡು: ಪಯಸ್ವಿನಿ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ಹರಿದು ಬಂದ ನೀರು; ಮನೆಗಳು ಜಲಾವೃತ

ಶೇರ್ ಮಾಡಿ

ನೇಸರ ಆ.29: ಅರಂತೋಡು ಇಲ್ಲಿನ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾದ ಘಟನೆ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.
ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಹರಿದು, ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತಗೊಂಡಿದ್ದು, ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.
ಭಾರೀ ಗಾತ್ರದ ಮರಗಳು ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

See also  "ಅಜ್ಜ-ಅಜ್ಜ ಕೊರಗಜ್ಜ" ಯಕ್ಷಗಾನ ಪ್ರದರ್ಶನ ||ಶ್ರೀ ಗಡಿಯಾಡಿ ಆದಿ ಮೊಗೆರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನ ಪಟ್ಲಡ್ಕ-ಕೊಕ್ಕಡ- ಕೌಕ್ರಾಡಿ||

Leave a Reply

Your email address will not be published. Required fields are marked *

error: Content is protected !!