ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದಿಂದ ಜಿನೇವಾ ಒಪ್ಪಂದ ದಿನಾಚರಣೆ

ಶೇರ್ ಮಾಡಿ

ನೇಸರ ಸೆ.01: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ನ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಜಿನೇವಾ ಒಪ್ಪಂದ ದಿನಾಚರಣೆಯ ಮಹತ್ವವನ್ನು ವಿವರಿಸುವುದರೊಂದಿಗೆ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಆಚರಿಸಲಾಯಿತು. ರೆಡ್ ಕ್ರಾಸ್ ಘಟಕದ ನಾಯಕರಾದ ಲತಾಶ್ರೀ ಡಿ ಹಾಗೂ ಶುಭಾ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸ್ತುತ ಶೈಕ್ಷಣಿಕ ವರ್ಷದ ಕೊನೆಯ ಸಭೆಯನ್ನು ಕರೆದು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಕೃಷ್ಣವೇಣಿ, ಅಶ್ವಿನಿ ಪಿ ಕೆ, ಸಂಜಯ್ ಜೆ ಎಸ್. ಅವರಿಗೆ ಬಹುಮಾನ ವಿತರಿಸಲಾಯಿತು. ಲತಾಶ್ರೀ ಡಿ ಸ್ವಾಗತಿಸಿ ವಂದಿಸಿದರು.

Leave a Reply

error: Content is protected !!