ನೇಸರ ಸೆ.02: 2022-23 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಒಬ್ಬರು ಪ್ರೌಢಶಾಲಾ ವಿಭಾಗ ಹಾಗೂ ಇನ್ನೊಬ್ಬರು ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರು ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರಾಧಾಕೃಷ್ಣ.ಟಿ ಆಯ್ಕೆಯಾಗಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ರಾಧಾಕೃಷ್ಣ.ಟಿ ಅವರ ಪಾತ್ರ ಮಹತ್ತರವಾಗಿದ್ದು, ಸುಮಾರು 17 ವರ್ಷಗಳಿಂದ ಇವರು ಕೊಯ್ಯೂರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತಿದ್ದ ಇವರ ಎಲ್ಲಾ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಪ್ರಭಾರ ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಅಮಿತಾನಂದ ಹೆಗ್ಡೆ ಯವರಿಗೆ ಕರ್ನಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಂಗಡಿ, ಹಳೆಪೇಟೆ, ಉಜಿರೆಯಲ್ಲಿ ಶಿಕ್ಷಕರಾಗಿ ಸಮೂಹ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿರುವ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿಯಾಗಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗಳ ಸ್ಪರ್ಧೆಗಳಲ್ಲಿ ಸಂಯೋಜಕರಾಗಿ, ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದು. ನೃತ್ಯ, ನಾಟಕಗಳ ತರಬೇತುದಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿರುವ ಅನುಭವವನ್ನು ಹೊಂದಿದ್ದಾರೆ.