
ನೇಸರ ಸೆ.04: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಶಿರಾಡಿ ಗ್ರಾಮ ಪಂಚಾಯತ್ ನ ಸಿಬ್ಬಂದಿ ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ತೋಮಸ್ ವಿ.ಎಂ ಹಾಗೂ ಫಿಲೋಮಿನಾ ದಂಪತಿಗಳ ಪುತ್ರ ತೇಜಸ್ (32.ವ) ರವರು ಸೆ.3 ರ ರಾತ್ರಿ 9.00ರ ವೇಳೆಗೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ತೇಜಸ್ ಕಳೆದ ಕೆಲವು ತಿಂಗಳುಗಳಿಂದ ಶಿರಾಡಿ ಗ್ರಾಮ ಪಂಚಾಯಿತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಕೆಲ ಸಮಯಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ತಂದೆ, ತಾಯಿ ಸಹೋದರನನ್ನು ಅಗಲಿದ್ದಾರೆ.





