ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಲೈಲ್ಯಾಂಡ್ ದೋಸ್ತ್ ಗಾಡಿ ; ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

ಶೇರ್ ಮಾಡಿ

ನೇಸರ ಸೆ.16:ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗಡಿ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲೈಲ್ಯಾಂಡ್ ದೋಸ್ತ್ ಗಾಡಿ ನೆಲಕ್ಕುರುಳಿದ ಘಟನೆ ಶುಕ್ರವಾರ ಬೆಳಗ್ಗೆ 7.30 ರ ಸುಮಾರಿಗೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಗಾಡಿ ನೆಲಕ್ಕುರುಳಿದ್ದು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಅಪಘಾತದಿಂದ ಘಾಟಿ ಪ್ರದೇಶದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು.
ಪರಶುರಾಮ ಕ್ರೇನ್ ತಂಡದ ಸದಸ್ಯರು, ಸ್ಥಳೀಯರು ಹಾಗೂ ನೆಲ್ಯಾಡಿ ಹೊರ ಠಾಣಾ ಪೊಲೀಸರು ಗಾಡಿ ಮೇಲೆತ್ತಿ ಸಂಚಾರ ಸುಗಮಗೊಳಿಸಿದರು.

Leave a Reply

error: Content is protected !!