ನೇಸರ ಡಿ4: ಕನ್ನಡದ ಹಿರಿಯ ನಟ ಶಿವರಾಂ ಅವರು ಇಂದು (ಡಿ 4) ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕನ್ನಡ ಚಿತ್ರರಂಗದಲ್ಲಿ ಶಿವರಾಂ ಅವರು ‘ಶಿವರಾಮಣ್ಣ’ ಅಂತಲೇ ಹೆಸರುವಾಸಿಯಾಗಿದ್ದರು. ಚಿಕ್ಕವಯಸ್ಸಿನಲ್ಲೇ ನಟನೆಯತ್ತ ಆಸಕ್ತಿ ಬೆಳೆಸಿಕೊಂಡ ಶಿವರಾಂ ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.ಆ ನಂತರ ಸಿನಿಮಾ ನಟ,ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ.
ಶಿವರಾಂ ಅವರಿಗೆ ಏನಾಗಿತ್ತು?
5 ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಶಿವರಾಂ ಅವರಿಗೆ ಕಾರು ಅಪಘಾತ ಆಗಿತ್ತು. ಇನ್ನು ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದಾಗ ಅಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಅಂದು ರಾತ್ರಿಯೇ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಲಾಗಿದೆ. ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ಅಂದಿನಿಂದ ಅವರಿಗೆ ಹೊಸಕೆರೆಹಳ್ಳಿ ಕ್ರಾಸ್‌ನಲ್ಲಿ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವೈದ್ಯರು ಸರ್ಜರಿ ಮಾಡಬೇಕು ಅಂತ ಹೇಳಿದ್ದರು. ಆದರೆ ಶಿವರಾಂ ಅವರಿಗೆ ವಯಸ್ಸಾಗಿರೋದರಿಂದ ಸರ್ಜರಿ ಮಾಡುವಂತಿರಲಿಲ್ಲ.
ಜೀವನ್ಮರಣ ಹೋರಾಟದಲ್ಲಿ ಹಿರಿಯ ನಟ ಶಿವರಾಂ ಬ್ರೇನ್ ಡ್ಯಾಮೇಜ್ ಆಗಿದೆ ಎಂದ ವೈದ್ಯರು.