ಡಾ.ಅನುರಾಧಾ ಕುರುಂಜಿಯವರಿಗೆ ಸೈಂಟ್ ಜೋಸೆಫ್ ಶಿಕ್ಷಕ – ರಕ್ಷಕ ಸಂಘದ ವತಿಯಿಂದ ಅಭಿನಂದನಾ ಸಮಾರಂಭ

ಶೇರ್ ಮಾಡಿ

ನೇಸರ ಸೆ.18: ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದವರು ಕೊಡಮಾಡಿದ ಕನ್ನಡ ಪಯಸ್ವಿನಿ ಪ್ರಶಸ್ತಿ – 22″ ಪುರಸ್ಕೃತ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ.ಅನುರಾಧಾ ಕುರುಂಜಿಯವರಿಗೆ ಅಭಿನಂದನಾ ಸಮಾರಂಭವನ್ನು ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಫಾದರ್ ವಿಕ್ಟರ್ ಡಿ’ಸೋಜರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಭಿನಂದಿಸಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕ- ರಕ್ಷಕ ಸಂಘದ ಕಾರ್ಯದರ್ಶಿ ಮಮತಾ, ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ದುರ್ಗಾ ಪ್ರಸಾದ್ ಅಭಿನಂದನಾ ಭಾಷಣ ಮಾಡಿದರು. ವಿದ್ಯಾರ್ಥಿನಿಯರಾದ ಅವನಿ ಪ್ರಾರ್ಥಿಸಿ, ಪಲ್ಲವಿ ಗುರುವಂದನೆ ಗೀತೆ ಅರ್ಪಿಸಿದ ಕಾರ್ಯಕ್ರಮದಲ್ಲಿ ಹೈಸ್ಕೂಲ್ ವಿಭಾಗದ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಹರೀಶ್ ರಾವ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಹೈಸ್ಕೂಲ್ ವಿಭಾಗದ ಶಿಕ್ಷಕ- ರಕ್ಷಕ ಸಂಘದ ಕಾರ್ಯದರ್ಶಿ ಚೇತನ ವಂದಿಸಿದರು. ಶಾಲಾ ನಾಯಕಿ ಇಂಚರ ಪಿ ಆರ್ ಮತ್ತು ಉಪನಾಯಕ ಶರಣ್ ಹೆಚ್ ರಾವ್ ಕಾರ್ಯಕ್ರಮ ನಿರೂಪಿಸಿದರು.

See also  "ಹೊಂಗನಸು" ಕೃತಿ ಬಿಡುಗಡೆ

Leave a Reply

Your email address will not be published. Required fields are marked *

error: Content is protected !!