ನೇಸರ ಸೆ.20: ಸರಕಾರಿ ಪ್ರೌಢಶಾಲೆ ಕೊಕ್ಕಡದಲ್ಲಿ ಸೆ.19 ರಂದು ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ ನೆರವೇರಿತು.
ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆಯ ಕೊರತೆ ನೀಗಿಸಲು ಸರಕಾರವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಮಕ್ಕಳ ಆರೋಗ್ಯ ರಕ್ಷಣೆಗೆ ಪೋಷಣ ಅಭಿಯಾನ ಅತ್ಯುತ್ತಮ ಕಾರ್ಯಕ್ರಮವಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಪದ್ಧತಿಗೆ ಸರಕಾರ ಒತ್ತು ನೀಡುವ ಉದ್ದೇಶದಿಂದ ಅಭಿಯಾನ ಆರಂಭಿಸಿದೆ. ಗ್ರಾಮೀಣ ಬಡ ಮಕ್ಕಳು ಹಾಗೂ ಗರ್ಭಿಣಿಯರು ಬಾಣಂತಿಯರು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಸುಧಾರಣೆ ಕಾಣಲು ಅನುಕೂಲವಾಗಲಿದೆ. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯವು ಬಹಳ ಮುಖ್ಯವಾಗಿರುತ್ತದೆ.
ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ತಮ್ಮ ಮನೆಯಲ್ಲಿ ಬೆಳೆದಿರುವ ತರಕಾರಿ, ವಿಟಮಿನ್ ಸೊಪ್ಪುಗಳು, ಇನ್ನಿತರ ಪೌಷ್ಟಿಕ ಆಹಾರ ಪದಾರ್ಥಗಳನ್ನು ತಂದು ಅದರಲ್ಲಿ ಸೊಗಸಾದ ಚಿತ್ರಗಳನ್ನು ಬಿಡಿಸುವುದರ ಮೂಲಕ. ಅದರ ಮಹತ್ವ ಮತ್ತು ಪ್ರಯೋಜನಗಳನ್ನು ತಿಳಿದುಕೊಂಡರು.
ಶಾಲಾ ಮುಖ್ಯೋಪಾಧ್ಯಾಯರಾದ ಹಳ್ಳಿಕೇರಿ ಪ್ರಭಾಕರ ನಾಯ್ಕ ಹಾಗೂ ಶಿಕ್ಷಕಿಯರು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಏಲಿಯಸ್ ಎಂ ಕೆ, ಉಪನ್ಯಾಸಕರಾದ ವಿಶ್ವನಾಥ್ ಶೆಟ್ಟಿ ಕೆ., ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಿರಿಯಪ್ಪ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಸಿ ಎಚ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.