ನೇಸರ ಸೆ.21: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸ್ವಚ್ಛ ಭಾರತ ಗ್ರಾಮೀಣ(ರಿ) ಜಿಲ್ಲಾ ಪಂಚಾಯತ್ ಮಂಗಳೂರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಪ್ರಾಕ್ತನ ವಿದ್ಯಾರ್ಥಿ ಸಂಘ, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 20.9.22 ರಂದು ಸುಬ್ರಹ್ಮಣ್ಯದ ರಥ ಬೀದಿಯಲ್ಲಿ ಸ್ವಚ್ಛ ಭಾರತ ಅಭಿಯಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಹಾಗೂ ಸದಸ್ಯರು, ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ನಿಂಗಯ್ಯ, ಸ್ವಚ್ಛ ಗ್ರಾಮೀಣ ಭಾರತ ಜಿಲ್ಲಾ ಪಂಚಾಯತ್ ಮಂಗಳೂರಿನ ಸಂಯೋಜಕರಾದ ಡೊಂಬಯ್ಯ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿ ಯು.ಡಿ ಶೇಖರ್, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ ಟಿ
ಪ್ರಾಕ್ತನ ವಿದ್ಯಾರ್ಥಿ ಸಂಘದ ಸದಸ್ಯರುಗಳು, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್, ಉಪನ್ಯಾಸಕರು ಗಳಾದ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಶ್ರೀಮತಿ ಆರತಿ, ಶ್ರೀಮತಿ ನಮಿತಾ, ಶ್ರೀಕುಮಾರ್ ಶೇಣಿ, ಶ್ರೀಮತಿ ಸವಿತಾ ಕಾರ್ಯಕ್ರಮಕ್ಕೆ ಸಹಕರಿಸಿದರು.