ದಸರಾ ರಜೆಯ ಗೊಂದಲಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಕೊನೆಗೆ ತೆರೆ ಎಳೆದಿದೆ

ಶೇರ್ ಮಾಡಿ

ನೇಸರ ಸೆ.24: 2022-23ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆಯನ್ನು ಆ.3 ರಿಂದ ಆ.16ರ ವರೆಗೆ ನಿಗದಿಪಡಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅನುಮೋದನೆಯನ್ನು ಸರಕಾರ ಆದೇಶಿಸಿರುವಂತೆ ಮಂಗಳೂರು ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ರಜೆ ನೀಡಲಾಗುವುದು. ಇದರಲ್ಲಿ ನಾಲ್ಕು ಹೆಚ್ಚುವರಿ ರಜೆಯನ್ನು ನವೆಂಬರ್ ತಿಂಗಳಲ್ಲಿ ನಾಲ್ಕು ಶನಿವಾರ ಪೂರ್ಣ ದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡಿಸಿ ಸರಿದೂಗಿಸಬೇಕು ಎಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಜ್ಞಾಪನಾ ಪತ್ರದಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬ ಹಾಗೂ ಶಾರದ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು. ಇದಕ್ಕೆ ಪೂರಕವಾಗಿ ಮಕ್ಕಳಿಗೆ ಹಬ್ಬದ ಸಂದರ್ಭದಲ್ಲಿ ರಜೆ ನೀಡಬೇಕು ಎಂಬ ಮಾತು ಕೇಳಿ ಬರುತ್ತಿತ್ತು.
ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಯಾವುದೇ ಆದೇಶ ಬಾರದೆ ಇದುದ್ದರಿಂದ ರಜೆ ನೀಡುವ ವಿಚಾರದಲ್ಲಿ ಗೊಂದಲ ಏರ್ಪಟ್ಟಿತ್ತು.

See also  ರಾಜ್ಯದ ಎಲ್ಲಾ ಶಾಲೆ,ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷ ಧ್ಯಾನ ಮತ್ತು ನೈತಿಕ ಶಿಕ್ಷಣ

Leave a Reply

Your email address will not be published. Required fields are marked *

error: Content is protected !!