
ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸೆ.25ರಂದು ನವರಾತ್ರಿ ಹಬ್ಬದ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆಯಲಿರುವುದರಿಂದ ದೇವಸ್ಥಾನದ ಒಳಾಂಗಣವನ್ನು, ಪೂಜಾಸಾಮಗ್ರಿಗಳನ್ನು ತೊಳೆದು ಹಾಗೂ ಹೊರಾಂಗಣ ಬೆಳೆದಿದ್ದ ಕಳೆಗಿಡಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬುಗೌಡ, ಸೇವಾ ಪ್ರತಿನಿಧಿ ಶ್ರೀಮತಿ ಚಂದ್ರಕಲಾ, ನಿರಂಜನ್, ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಮೈರೋಳ್ತಡ್ಕ ಒಕ್ಕೂಟದ ಸದಸ್ಯರು ಭಾಗವಹಿಸಿದರು.




