ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜುನ ವಿದ್ಯಾರ್ಥಿ ಮಹಮ್ಮದ್ ಸಾಬಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನೆಲ್ಯಾಡಿ ಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಸಾಬಿತ್ ರವರು ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಪಡುಬೆಟ್ಟಿನ ಅಮೀರ್ ಮತ್ತು ಆಸ್ಯಮ್ಮ ದಂಪತಿಗಳ ಪುತ್ರನಾಗಿದ್ದು, ಇವರಿಗೆ ದೈಹಿಕ ನಿರ್ದೇಶಕ ಮಹಮ್ಮದ್ ಹಾರಿಸ್ ರವರು ತರಬೇತಿ ನೀಡಿರುತ್ತಾರೆ. ಇವರ ಸಾಧನೆಗೆ ವಿದ್ಯಾಸಂಸ್ಥೆಯ ಸಂಚಾಲಕರಾದ ಅಬ್ರಹಾಂ ವರ್ಗೀಸ್ ಹಾಗೂ ಪ್ರಾಂಶುಪಾಲರಾದ ಎಲಿಯಾಸ್ ಎಂ ಕೆ., ರವರು ಮತ್ತು ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!