ಮುಂಡಾಜೆ: ಇಲ್ಲಿನ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದಂತ ತಪಾಸಣಾ ಶಿಬಿರವು ಸ.ಉ.ಪ್ರಾ. ಶಾಲೆ, ಬಯಲು ಇಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷೆ ಮನೋರಮಾ ಭಟ್ ರವರು ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ.ಮುಕ್ತಾ ಪಟವರ್ಧನ್ ದಂತ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿ, ಹಲ್ಲಿನ ಆರೋಗ್ಯದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಯೋನ್ ಆಶ್ರಮದ ಟ್ರಸ್ಟಿ ಡಾ.ಯು.ಸಿ. ಪೌಲೋಸ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಸಮಾಜಕ್ಕೆ ಆಸ್ತಿಯಾಗಿ ಬೆಳೆಯಬೇಕು ಎಂದರು.
ಡಾ. ದೀಪಾಲಿ ಡೊಂಗ್ರೆ, ಡಾ.ಮನಿಷ್ ಡೋಂಗ್ರೆ, ರೀನಾ ನೆರಿಯ, ಪುಷ್ಪಾ, ರಾಜಪ್ಪ ಗೌಡ ಅಂಬ್ಲೆ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು, ಉಪನ್ಯಾಸಕಿ ವಿದ್ಯಾ ರಾವ್ ನಿರ್ವಹಿಸಿದರು. ಶಿಬಿರಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಶಿಬಿರಾರ್ಥಿ ಹೇಮಂತ್ ಕೆ. ಆರ್. ವಂದಿಸಿದರು. ಶಿಬಿರಾರ್ಥಿಗಳ ದಂತ ತಪಾಸಣೆಯನ್ನು ನಡೆಸಲಾಯಿತು.