ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್(ವ.25) ಅ.8 ರಂದು ರಾತ್ರಿ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ನೆಲ್ಯಾಡಿ ಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಪೋಲಿಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ತಾಯಿ ಎಲ್ಸಮ್ಮ, ಸಹೋದರ ಲಿಜೊ ರವರನ್ನು ಅಗಲಿದ್ದಾರೆ.