ನೆಲ್ಯಾಡಿ: ಕಾರು ಮತ್ತು ಬೈಕ್ ಗಳ ಮಧ್ಯೆ ಅಪಘಾತ; ಮಹಿಳೆಗೆ ಗಾಯ

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ.
ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಂದೀಪ್ ಎಂಬವರಿಗೆ ಸೇರಿದ ಕಾರು ಹಾಗೂ ಹೊಸಮಜಲಿ ನಿಂದ ಬೈಕಿನಲ್ಲಿ ಮನೆಗೆ ಪ್ರಯಾಣಿಸುತ್ತಿದ್ದ ಬನಾರಿ ನಿವಾಸಿ ಸತೀಶ್ ಹಾಗೂ ಪ್ರಜ್ಞಾ ರ ಬೈಕಿನ ಮಧ್ಯೆ ಅಪಘಾತ ಸಂಭವಿಸಿ. ಇವರಲ್ಲಿ ಪ್ರಜ್ಞಾ ರವರು ಗಾಯಗೊಂಡು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

error: Content is protected !!