ನೇಸರ ಡಿ09 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಂಪಾಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಕೈಗೊಂಡಿರುವ ಪಾದಯಾತ್ರೆ ಒಂದು ಉತ್ತಮ ಕಾರ್ಯ. ನಾವು ದೇಹವನ್ನು ದಂಡಿಸಿ ಶ್ರೀ ದೇವರ ದರುಶನ ಪಡೆದಾಗ ಅಲ್ಲೊಂದು ವಿಶೇಷ ಅನುಭವ ಸಿಗಲಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಹಿಂದೂ ಸಮಾಜವನ್ನು ಒಗ್ಗೂಡಿಸಿ ಮುನ್ನಡೆಯಬೇಕಿದೆ. ನಮ್ಮ ವ್ಯಕ್ತಿತ್ವದಲ್ಲಿ ನಡಿ-ನುಡಿ ನೇರವಾಗಿರಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಸಂಚಾಲಕ ಕೃಷ್ಣ ಮೂರ್ತಿ ಹೇಳಿದರು.
ದಿನಾಂಕ 8-12-21ನೇ ಬುಧವಾರದಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಕಡಬ ಪ್ರಖಂಡ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ನೆಡೆಗೆ ಧರ್ಮಜಾಗೃತಿಗಾಗಿ ಪಾದಯಾತ್ರೆ ಹಾಗೂ ಹಸಿರು ಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ನೆರವೇರಿಸಿದರು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅವರು ಅಧ್ಯಕ್ಷತೆ ವಹಿಸಿದ್ದರು. ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸೇವಾಪ್ರಮುಖ್ ನರಸಿಂಹ ಪೂಂಜಾ, ವಿಶ್ವಹಿಂದೂ ಪರಿಷತ್ ಭಜರಂಗದಳದ ಕಡಬ ಪ್ರಖಂಡದ ರಾಧಾಕೃಷ್ಣ ಕೋಲ್ಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಮೇಶ್ ಶೆಟ್ಟಿ ಸಾಯಿರಾಮ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಪಾದಯಾತ್ರೆಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ಚಾಲನೆ ನೀಡಲಾಯಿತು. ಬಳಿಕ ಧರ್ಮ ಜಾಗೃತಿಗಾಗಿ ಪಾದಯಾತ್ರೆ ಮೂಲಕ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಲಾಯಿತು. ಕಡಬ ವ್ಯಾಪ್ತಿಯ ಹಿಂದೂ ಬಾಂಧವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.