ಬೆಳ್ತಂಗಡಿ ಪಡಂಗಡಿ ಗ್ರಾಮದ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದ ಮೃತ್ಯು

ಶೇರ್ ಮಾಡಿ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ.
ಮಕ್ಕಳಿಗೆ ಕರಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ
ರ್ವ ಬಾಲಕ ನಿನ್ನೆ ಮೃತ ಪಟ್ಟಿದ್ದು ಇನ್ನೋರ್ವ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ. ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

error: Content is protected !!