ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನದ ‘ನನ್ನ ಹಾಡು ನನ್ನದು ಅಭಿಯಾನ’

ಶೇರ್ ಮಾಡಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನದ ‘ನನ್ನ ಹಾಡು ನನ್ನದು ಅಭಿಯಾನ’ ವು ನಡೆಯಿತು. ೬೭ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನಲೆಯಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಮ್ಮಿಕೊಂಡ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳೆಲ್ಲರು ನಾಡಗೀತೆಯನ್ನು ಹಾಡುವುದರ ಮೂಲಕ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆ., ಯವರು ವಿದ್ಯಾರ್ಥಿಗಳಿಗೆ ಸಂಕಲ್ಪ ವಿಧಿಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಏಕಕಾಲದಲ್ಲಿ ನಾಡಗೀತೆಯ ಗಾಯನ ಮಾಡಿದರು.

Leave a Reply

error: Content is protected !!