ಕಡಬ : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಜನಾರ್ದನ ಕೆ.ಎನ್.ಪ್ರಾಸ್ತಾವಿಕ ಮಾತನಾಡಿದರು ಮತ್ತು ಸಂಕಲ್ಪ ವಿಧಿ ಭೋದಿಸಿದರು. ವಿದ್ಯಾರ್ಥಿಗಳಿಂದ ನನ್ನ ನಾಡು-ನನ್ನ ಹಾಡು ಸಮೂಹ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು.
ವಿದ್ಯಾರ್ಥಿಗಳು ಸಾಮೂಹಿಕವಾಗಿ 6 ಹಾಡುಗಳನ್ನು ಹಾಡಲಾಯಿತು. ಕಾಲೇಜಿನ ಹಿರಿಯ ಉಪನ್ಯಾಸಕರಾದ ವಾಸುದೇವ ಗೌಡ ಕೋಲ್ಪೆ ಸ್ವಾಗತಿಸಿದರು. ಜ್ಞಾನೇಶ್ವರ ಎಸ್ ವಂದನಾರ್ಪಣೆ ಮಾಡಿದರು .ಶ್ರೀಮತಿ ಲಾವಣ್ಯ ಕೆ.ಎಲ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮಾಧಿಕಾರಿ ಸಲೀನ್ ಕೆ.ಪಿ ಮತ್ತು ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.