ನೆಲ್ಯಾಡಿ ಗಂಗಾಧರ ಶೆಟ್ಟಿ ಹೊಸಮನೆಯವರ ಸಮಾಜ ಸೇವೆಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ, ಸಮಾಜ ಸೇವಕ, ಕೃಷಿಕ ಗಂಗಾಧರ ಶೆಟ್ಟಿ ಹೊಸಮನೆ ಅವರು ಸಮಾಜ ಸೇವೆಗೆ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಮಾಜ ಸೇವೆ ಗುರುತಿಸಿ ಗಂಗಾಧರ ಶೆಟ್ಟಿ ಹೊಸಮನೆ ಅವರನ್ನು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಅಮೆತ್ತಿಮಾರುಗುತ್ತು ಕಳ್ಳಿಗೆಬೀಡು ದಿ.ವಾಸಪ್ಪ ಶೆಟ್ಟಿ ಮತ್ತು ಕೊಂಬಿಲ ದಿ.ಕಲ್ಯಾಣಿ ಶೆಟ್ಟಿಯವರ ಪುತ್ರರಾಗಿರುವ ಗಂಗಾಧರ ಶೆಟ್ಟಿಯವರು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಳೆದ 15 ವರ್ಷಗಳಿಂದ ಕಡಬ ತಾಲೂಕಿನ 12 ಗ್ರಾಮಗಳಲ್ಲಿ 45 ಉಚಿತ ಕಣ್ಣಿನ ಶಿಬಿರ ಆಯೋಜಿಸಿ 500ಕ್ಕೂ ಹೆಚ್ಚು ಮಂದಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಪುತ್ತೂರಿನ ಆನಂದಾಶ್ರಮ ಸೇವಾ ಟ್ರಸ್ಟ್‌ನ ಸಹಯೋಗದಲ್ಲಿ ಡಾ.ಗೌರಿ ಪೈಯವರ ಮಾರ್ಗದರ್ಶನದಲ್ಲಿ 5000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಆರೋಗ್ಯ ಶಿಬಿರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ ) ಸಹಯೋಗದೊಂದಿಗೆ ಕಳೆದ ಹತ್ತು ವರ್ಷಗಳಲ್ಲಿ ಸುಮಾರು 180ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರ, ದುಶ್ಚಟ ಮುಕ್ತ ಸಮಾಜಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶಯದಂತೆ ಹದಿಹರೆಯದ ಮಕ್ಕಳಿಗೆ ಸ್ವಾಸ್ಥ ಸಂಕಲ್ಪ ಶಿಬಿರವನ್ನು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ 600 ಕುಟುಂಬಗಳಿಗೆ ಕೊರೋನಾ ಸಂದರ್ಭದಲ್ಲಿ ಉಚಿತ ಆಹಾರ ಸಾಮಗ್ರಿ ವಿತರಣೆ, ಮಹಿಳಾ ಸಬಲೀಕರಣಕ್ಕೆ ವಿಶೇಷವತ್ತು, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿವರ್ಷ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಉಚಿತ ರಕ್ತದಾನ ಶಿಬಿರ, ಕೃಷಿ ವಿಚಾರ ಸಂಕೀರ್ಣ, ವನಮಹೋತ್ಸವ ಆಯೋಜನೆ ಹಾಗೂ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿದ್ದರು. ಇವರ ಸಾಮಾಜಿಕ ಸೇವೆ ಗುರುತಿಸಿ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

See also  ಜ್ಞಾನವನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳದೇ ಇದ್ದರೆ ಪಡೆದ ಶಿಕ್ಷಣ ವ್ಯರ್ಥ :ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ

Leave a Reply

Your email address will not be published. Required fields are marked *

error: Content is protected !!