ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಆಧುನಿಕತೆಯು ನಮ್ಮ ಇತಿಹಾಸದ ಅಂಶಗಳಲ್ಲಿ ಅಡಗಿದೆ ಎಂದು ದಿಲೀಪ್ ಕುಮಾರ್ ಸಂಪಡ್ಕ, ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ಒಂತರಾಡ್ಕ , ಇವರು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳ ನೆಲೆಯಲ್ಲಿ ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಡಾ. ಗೋವಿಂದ ಎನ್.ಎಸ್ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ.ಎನ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ರಮ್ಯಾ ಹಾಗೂ ನಮಿತಾ ಐತಿಹಾಸಿಕ ಸ್ಥಳಗಳ ಕುರಿತು ಪ್ರಬಂಧ ಮಂಡಿಸಿದರು. ಸಂತೋಷ್ ತೃತೀಯ ಕಲಾವಿಭಾಗ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಶ್ರೀಮತಿ ನಮಿತಾ.ಎಂ. ಎ ಧನ್ಯವಾದ ಸಮರ್ಪಿಸಿದರು. ಇತಿಹಾಸ ವಿಭಾಗದಿಂದ ಹಳೆಯ ವಸ್ತುಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಯಿತು