ನೆಲ್ಯಾಡಿ ಬೆಥನಿ ವಿದ್ಯಾ ಸಂಸ್ಥೆ ಗೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ವಿನ್ನರ್ ಪ್ರಶಸ್ತಿ

ಶೇರ್ ಮಾಡಿ

ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜ್ ನೆಲ್ಯಾಡಿ, ಇವರ ಸಹಯೋಗದಲ್ಲಿ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟ ಬೆಥನಿ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ತಾಲೂಕು ಅಕ್ಷರ ದಾಸೋಹದ ಮುಖ್ಯ ನಿರ್ವಹಣಾಧಿಕಾರಿ ವಿಷ್ಣು ಪ್ರಸಾದ್ ದೀಪ ಬೆಳಗುದರ ಮೂಲಕ ಉದ್ಘಾಟಿಸಿದರು. ಕ್ರೀಡಾಕೂಟದ ಧ್ವಜಾರೋಹಣ ವನ್ನು ನೆಲ್ಯಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಬ್ಬರ್ ನೆರವೇರಿಸಿದರು. ಕ್ರೀಡಾಕೂಟದಲ್ಲಿ ಉಪ್ಪಿನಂಗಡಿ ವಲಯದ ಸುಮಾರು ಒಂದು ಸಾವಿರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಕ್ರೀಡಾಕೂಟದಲ್ಲಿ ವಲಯದ ಸಂಪನ್ಮೂಲ ಅಧಿಕಾರಿಗಳು, ಬೆಥನಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು, ಬೆಥನಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ, ಬೆಥನಿ ವಿದ್ಯಾ ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು,ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ಎರಡು ದಿನದ ಸ್ಪರ್ಧಾಕೂಟದಲ್ಲಿ ಬೆಥನಿ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಮಗ್ರ ವಿನ್ನರ್ ಪ್ರಶಸ್ತಿಯನ್ನು ಪಡೆದರೆ. ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳು ಸಮಗ್ರ -ರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡರು ಬೆಥನಿ ಸಂಸ್ಥೆಯ ವಿದ್ಯಾರ್ಥಿಗಳಾದ ಸಚಿನ್ ಹಾಗೂ ಅಕ್ಷಯ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡರು.

Leave a Reply

error: Content is protected !!