
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಮಾರ್ಚ್, ಏಪ್ರಿಲ್‌ನಲ್ಲಿ ಎಸ್ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿದೆ.
2023 ಮಾರ್ಚ್ / ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅವಕಾಶ ನೀಡಲಾಗಿದ್ದು, ಈ ಹಿಂದೆ ದಿನಾಂಕವನ್ನು 10-11-2022 ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈ ದಿನಾಂಕವನ್ನು ವಿಸ್ತರಿಸಿದ್ದು, ಪರೀಕ್ಷೆ ನೋಂದಣಿಗೆ 25-11-2022 ರವರೆಗೆ ಅವಕಾಶ ನೀಡಿದೆ. ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ.




