ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬದಿಂದ ಹದಿನೈದು ಸಾವಿರ ಜನ ನೂರಕ್ಕೂ ಹೆಚ್ಚು ವಾಹನ – ತಮ್ಮಯ್ಯ ಗೌಡ

ಶೇರ್ ಮಾಡಿ

ಕಡಬ: ಮಂಗಳೂರಿನ ಭಾವುಟ ಗುಡ್ಡೆಯಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಹೋರಾಟಗಾರ ಸಮರ ವಿರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬ ತಾಲೂಕಿನಿಂದ 15,000 ಮಿಕ್ಕಿಜನ ಸುಮಾರು ನೂರಕ್ಕಿಂತ ಹೆಚ್ಚು ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಹೇಳಿದರು.

ಅವರು ಕಡಬ ಗೌಡ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಆಶ್ರಯದಲ್ಲಿ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಂಡ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ನವೆಂಬರ್ 19 ರಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ಡಾ.ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆಯಲ್ಲಿ ಕಡಬ ತಾಲೂಕಿನ 42 ಗ್ರಾಮಗಳಲ್ಲಿ ಪ್ರವಾಸ ಮಾಡಿ ಜನಜಾಗೃತಿಗೊಳಿಸಿ ಆಮಂತ್ರಣ ಪತ್ರಿಕೆ ಹಂಚಲಾಗಿದೆ. ಕಡಬ ತಾಲೂಕಿನಿಂದ 15 ಸಾವಿರಕ್ಕಿಂತ ಹೆಚ್ಚು ಜನ ಈ ಪುಣ್ಯದ ಕಾರ್ಯಕ್ರಮಕ್ಕೆ ಭಾಗವಹಿಸುವ ನಿರೀಕ್ಷೆಯಿದೆ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ 20 ವರ್ಷಗಳ ಹಿಂದೆ ಅಮರ ಸುಳ್ಯದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರು ಈ ಭಾಗದ ರೈತಾಪಿ ವರ್ಗದವರೆಲ್ಲರನ್ನೂ ಒಗ್ಗೂಡಿಸಿ ಬಲಿಷ್ಠ ಸೇನೆ ಕಟ್ಟಿ, ಸಮರಾಭ್ಯಾಸ ಮಾಡಿಸಿ ಬ್ರಿಟಿಷರ ದಬ್ಬಾಳಿಕೆಯ ವಿರುದ್ದ ಹೋರಾಡಿ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಮ್ಮ ತುಳುನಾಡಿನ ಬಾವುಟವನ್ನು ಹಾರಿಸಿ 13 ದಿನಗಳ ಕಾಲ ಆಡಳಿತ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದರೂ, ಇದೀಗ ಇಂತಹ ವೀರ, ಶೂರ, ಧೀರ ರಾಮಯ್ಯ ಗೌಡರವರ ಶೌರ್ಯದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳುವ ಕಾರ್ಯಕ್ರಮಕ್ಕೆ ಧರ್ಮ, ಜಾತಿ, ಮತ ಭೇದ ಮರೆತು ನಾವೆಲ್ಲರೂ ದೇಶಭಕ್ತ ಬಂಧುಗಳು ಭಾಗವಹಿಸುವುದು ಅಪರೂಪದ ಪುಣ್ಯದ ಕ್ಷಣವಾಗಿದೆ. ಜನ ತಮ್ಮ ಸ್ವಂತ ವಾಹನಗಳನ್ನು ಬಳಸಿಕೊಂಡು, ತಮ್ಮ ನೆರೆಹೊರೆಯವರೊಂದಿಗೆ ಅತ್ಯಧಿಕ ಸಂಖ್ಯೆಯಲ್ಲಿ ನಾವೆಲ್ಲರೂ ಭಾಗವಹಿಸುವ ರೀತಿಯಲ್ಲಿ ಸಂಘಟನೆ ಮಾಡಲಾಗಿದೆ ಎಂದು ತಮ್ಮಯ್ಯ ಗೌಡ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಕೆದಮಬಾಡಿ ರಾಮಯ್ಯ ಗೌಡರು ನಮ್ಮ ಜಿಲ್ಲೆಯ ಐತಿಹಾಸಿಕ ಪುರುಷ ಇವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಜಾತಿ ಧರ್ಮ ಭೇಧ ಮರೆತು ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವ ಮೂಲಕ ಸ್ವಾತಂತ್ರ್ಯ ವೀರನಿಗೆ ಗೌರವ ಸಲ್ಲಿಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಕಡಬ ತಾಲೂಕು ಗೌರವಾಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು, ಕಾರ್ಯದರ್ಶಿ ಮಂಜುನಾಥ ಗೌಡ ಕೊಲಂತಾಡಿ, ನೂತನ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಜೋಡಿ, ಮಹಿಳಾ ಘಟಕದ ಅಧ್ಯಕ್ಷೆ ನೀಲಾವತಿ ಶಿವರಾಮ ಗೌಡ, ಹಿರಿಯ ಮುಖಂಡ ಜನಾರ್ಧನ ಗೌಡ ಪಣೆಮಜಲು, ಪ್ರಮುಖರಾದ ಶಿವಪ್ರಸಾದ್ ಪುತ್ತಿಲ, ವೆಂಕಟ್ರಾಜ್ ಗೌಡ ಕೋಡಿಬೈಲು, ಧರ್ಮಪಾಲ ಗೌಡ ಕಣ್ಕಲ್, ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!