ನ.20ರಂದು ಕುಕ್ಕೆಯಲ್ಲಿ ಮಧ್ಯಾಹ್ನವರೆಗೆ ದೇವರ ದರ್ಶನವಿಲ್ಲ

ಶೇರ್ ಮಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.20ರಂದು ಬೆಳಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಇರುವುದಿಲ್ಲ.
ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಅಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಆ ದಿನ ಭಕ್ತರಿಗೆ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. 2 ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

See also  ನೆಲ್ಯಾಡಿ:ವಾರ್ಷಿಕ ಸ್ನೇಹ ಸಮ್ಮಿಲನ-2022 ಮತ್ತು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ

Leave a Reply

Your email address will not be published. Required fields are marked *

error: Content is protected !!