ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕೆ.ಸಿ ರಾಜ್ಯ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಅರಂತೋಡು:ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕೆ. ಸಿ 3000 ಮತ್ತು 1500 ಮೀ ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕೆ ಪಿ ಎಸ್ ಬೆಳ್ಳಾರೆಯಲ್ಲಿ ನಡೆದ ತಾಲೂಕು ಮಟ್ಟದ 3000 ಮೀ ದ್ವಿತೀಯ ಹಾಗೂ 1500 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರು. 

ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ನಡೆದ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ 3000 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ, 1500ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. 

ಇವರು ಕಾಸ್ಪಾಡಿ ಚಿನ್ನಪ್ಪ ಕೆ ಕೆ ಹಾಗೂ ಲಕ್ಷ್ಮಿ ದಂಪತಿಯ ದ್ವಿತೀಯ ಪುತ್ರಿ. ಇವರಿಗೆ ಪ್ರಾಪ್ತಿ ಕೆ ಸಿ ಮತ್ತು ಧೃತಿ ಕೆ ಸಿ ಇಬ್ಬರು ಸಹೋದರಿಯರು ಇದ್ದಾರೆ. ಮುಖ್ಯ ಗುರುಗಳಾದ ಎಂ. ಕೆ. ಸೀತಾರಾಮರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಜಯರಾಮ ಪೆರುಮುಂಡ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀಮತಿ ಶಾಂತಿ ಎ. ಕೆ ತರಬೇತಿ ನೀಡಿರುತ್ತಾರೆ. 

ಶಿಕ್ಷಕರಾದ ಮನೋಜ್ ಉಳುವಾರು ಹಾಗೂ ಸಂದೇಶ್ ಅಡ್ಕಾರ್ ಸಹಕರಿಸಿದ್ದಾರೆ. ಪ್ರಸ್ತುತ ಇವರು ಅರಂತೋಡು ಗ್ರಾಮದ ಅಡ್ತಲೆಯಲ್ಲಿ ವಾಸವಾಗಿದ್ದಾರೆ.

ಜಾಹೀರಾತು

Leave a Reply

error: Content is protected !!