ಧರ್ಮಸ್ಥಳ ಲಕ್ಷ ದೀಪೋತ್ಸವ; ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

ಶೇರ್ ಮಾಡಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ಶನಿವಾರ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ನಡೆಯಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟನೆ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದು ಆಶೀರ್ವದಿಸಿದರು.

ಹೆಗ್ಗಡೆಯವರ ಮೊಮ್ಮಗಳು ಮಾನ್ಯ, ಎಸ್‌ಡಿಎ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್,ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಆಡಳಿತ ನಿರ್ದೇಶಕ ಕೆ ಎನ್ ಜನಾರ್ಧನ್, ವಸ್ತು ಪ್ರದರ್ಶನ ಮಳಿಗೆ ಮೇಲುಸ್ತುವಾರಿ ಯತೀಶ್ ಬಳಂಜ, ಹೆಗಡೆಯವರ ಆಪ್ತ ಕಾರ್ಯದರ್ಶಿ ಎ ವಿ ಶೆಟ್ಟಿ, ಎಸ್ ಡಿ ಎಂ ಆಸ್ಪತ್ರೆ ಆಡಳಿತ ಅಧಿಕಾರಿ ಜನಾರ್ಧನ್, ಜನಜಾಗೃತಿ ವೇದಿಕೆ ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಿಸ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್, ರಾಮಕೃಷ್ಣ ಗೌಡ, ರತ್ನರಾಜ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

See also  ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

Leave a Reply

Your email address will not be published. Required fields are marked *

error: Content is protected !!