ಶೇರ್ ಮಾಡಿ

ಕೊಕ್ಕಡ: ಮಾಜಿ ಕಂದಾಯ ಸಚಿವ ಹಾಗೂ ಹಾಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ದಂಪತಿ ಸಮೇತ ನವೆಂಬರ್ 21ರ ಬೆಳಗ್ಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಸುಬ್ರಹ್ಮಣ್ಯ ಎಡಪಡಿತ್ತಾಯ ದಂಪತಿಗಳು ಉಪಸ್ಥಿತರಿದ್ದರು.

ದೇವಳದ ವತಿಯಿಂದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಕೆದಿಲಾಯ, ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ಹಿರಿಯರಾದ ಸುಬ್ರಮಣ್ಯ ಉಪ್ಪಾರ್ಣ, ಕೊಕ್ಕಡ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಕ್ಷೇತ್ರದ ಪ್ರಧಾನ ಅರ್ಚಕರಾದ ರಮಾನಂದ ಭಟ್ ಹಾಗೂ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಹಕರಿಸಿದರು.




