ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಕೃತಿ.ಕೆ ವೈಯಕ್ತಿಕ ಚಾಂಪಿಯನ್ ಶಿಪ್ ನೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಪುತ್ತೂರು : ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು, ಸರಕಾರಿ ಪ್ರೌಢಶಾಲೆ ಅತ್ತಾವರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನವಂಬರ್ 15 ಮತ್ತು 16 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ಕೃತಿ.ಕೆ(ಬನ್ನೂರು ಕೊರಗಪ್ಪ ಗೌಡ ಮತ್ತು ವನಿತಾ.ಎ ದಂಪತಿ ಪುತ್ರಿ) 400 ಮೀ ಪ್ರಥಮ, 600ಮೀ ಪ್ರಥಮ, 200ಮೀ ತೃತೀಯ ಹೀಗೆ 3 ಚಿನ್ನ ಹಾಗೂ 1 ಕಂಚಿನ ಪದಕಗಳೊಂದಿಗೆ ಪುತ್ತೂರು ತಾಲೂಕಿನಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಗೆದ್ದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಪುತ್ತೂರು ತಾಲೂಕಿನಿಂದ ಭಾಗವಹಿಸಿರುವ ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಚಾಂಪಿಯಾನ್‍ಶಿಪ್‍ಗೆ ಭಾಜನರಾಗಿರುವ ಏಕೈಕ ವಿದ್ಯಾರ್ಥಿನಿ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

See also  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Leave a Reply

Your email address will not be published. Required fields are marked *

error: Content is protected !!