ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ; ಧರ್ಮಸ್ಥಳ ಶಾಂತಿವನ ಟ್ರಸ್ಟ್ – ವಿವಿಧ ಸ್ಪರ್ಧೆಗಳು

ಶೇರ್ ಮಾಡಿ

ಪುತ್ತೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್(ರಿ) ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕು ಮಟ್ಟದ ಜ್ಞಾನ ವಿಕಾಸ / ಜ್ಞಾನ ಪ್ರಕಾಶ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಉಡುಪಿ ಶ್ರೀ ಸತ್ಯಸಾಯಿ ಅನನ್ಯ ನಿಕೇತನಂ ಇದರ ಶೈಕ್ಷಣಿಕ ಸಂಯೋಜಕರಾದ ಪ್ರೊಫೆಸರ್ ಗೋವಿಂದ ಭಟ್ಟ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಎಂ ಶಿವಪ್ರಕಾಶ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಸುವರ್ಣ ಇದರ ಅಧ್ಯಕ್ಷರಾದ ವೆಂಕಟರಮಣ ಕಳುವಾಜೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ, ಖ್ಯಾತ ನೋಟರಿ ನ್ಯಾಯವಾದಿಗಳಾದ ಶ್ರೀ ಭಾಸ್ಕರ ಕೋಡಿಂಬಾಳ, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಉಮೇಶ್ ನಾಯಕ್, ನೃತ್ಯ ಶಿಕ್ಷಕಿ ಶ್ರೀಮತಿ ಶಾರದಾ ದಾಮೋದರ್, ಪತ್ರಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಲೋಕೇಶ್ ಅಲುಂಬುಡ ಇವರನ್ನು ಸನ್ಮಾನಿಸಲಾಯಿತು. ಸಂಜೆಯ ನಗರ ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಉಳಯ ಇವರು ಸನ್ಮಾನಿತರನ್ನು ಪರಿಚಯಿಸಿ ಅಭಿನಂದಿಸಿದರು. ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇಲ್ಲಿನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ.ಐ ಶಶಿಕಾಂತ್ ಜೈನ್ ಪ್ರಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ತಾಲೂಕು ಯೋಗ ಸಂಘಟಕರು ಹಾಗೂ ಕೈಕಾರ ಶಾಲೆಯ ಮುಖ್ಯ ಶಿಕ್ಷಕರು ಆದ ರಾಮಣ್ಣ ರೈ ಸ್ವಾಗತಿಸಿ, ಪುತ್ತೂರು ಬಾಲವನದ ಸಂಯೋಜನಾಧಿಕಾರಿ ಜಗನ್ನಾಥ ವಂದಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಯಶೋಧ ಕೆ ಇವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮ ಹಾಗೂ ಸ್ಪರ್ಧೆಗಳ ವ್ಯವಸ್ಥೆಯನ್ನು ಶ್ರೀಮತಿ ಲತ ಕುಮಾರಿ ಸಂಯೋಜಿಸಿದ್ದರು.
ತಾಲೂಕಿನ ಸುಮಾರು 40 ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿದ್ದರು ಧರ್ಮಸ್ಥಳದ ವತಿಯಿಂದ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಬೆಳಗ್ಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ನೀಡಿ ಅಭಿನಂದಿಸಲಾಯಿತು.

Leave a Reply

error: Content is protected !!