ಅರಸಿನಮಕ್ಕಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಅರಸಿನಮಕ್ಕಿಯಲ್ಲಿ ವಿಜೃಂಭಣೆಯಿಂದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸಲಾಯಿತು. ಕಳೆದ ಹಲವಾರು ವರ್ಷಗಳಿಂದ ಈ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಣಿಗಲ್ ಗೆ ವರ್ಗಾವಣೆಗೊಂಡಿರುವ ದಾಕ್ಷಾಯಿಣಿ ಬಿ ಎಸ್ ಇವರನ್ನು ಕಾಲೇಜಿನ ಉಪನ್ಯಾಸಕರುಗಳು, ಊರಿನ ನಾಗರಿಕರು, ವಿದ್ಯಾರ್ಥಿಗಳು ಸೇರಿ ಬೀಳ್ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಯ್ಯ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ದುಗ್ಗಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿರುವ ರಾಘವೇಂದ್ರ ನಾಯಕ್, ಗ್ರಾಮ ಪಂಚಾಯಿತಿ ಅರಸಿನಮಕ್ಕಿಯ ಸದಸ್ಯರಾಗಿರುವ ಸುಧೀರ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀರಂಗ ದಾಮ್ಲೆ, ಪಾಲಕರ ಪ್ರತಿನಿಧಿಯಾದ ಕೃಷ್ಣಪ್ಪ ಗೌಡರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಮಧು ಎ ಜೆ., ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರದ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಹಾಗೂ ಕನ್ನಡ ಉಪನ್ಯಾಸಕಿ ಶ್ರೀಮತಿ ಪವಿತ್ರ ಶ್ರೀಮತಿ ದಾಕ್ಷಾಯಿಣಿ ಹಾಗೂ ಮುಖ್ಯ ಅತಿಥಿ ದುರ್ಗಪ್ಪ ಇವರ ಪರಿಚಯ ಮಾಡಿದರು. ಕಚೇರಿ ಸಿಬ್ಬಂದಿ ಕುಮಾರಿ ರಶ್ಮಿತಾ ಬಹುಮಾನಗಳಿಸಿರುವ ಮಕ್ಕಳ ಪಟ್ಟಿಯನ್ನು ವಾಚಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಕುಮಾರಿ ರಮಣಿ ಸ್ವಾಗತಿಸಿ. ರಾಜ್ಯಶಾಸ್ತ್ರ ಉಪನ್ಯಾಸಕಿ ಕುಮಾರಿ ಉಷಾ ವಂದಿಸಿದರು. ಇತಿಹಾಸ ಉಪನ್ಯಾಸಕಿ ಶ್ರೀಮತಿ ಸೌಮ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ಲಹರಿ ಕಲಾ ತಂಡ ನೆಲ್ಯಾಡಿ ಇವರಿಂದ ಸಂಗೀತ ರಸಮಂಜರಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ವೈವಿಧ್ಯ ನಡೆಯಿತು.