5 ಮತ್ತು 8ನೇ ತರಗತಿಗಳಿಗೆ ‘ಪಬ್ಲಿಕ್’ ಪರೀಕ್ಷೆ : ಶಿಕ್ಷಣ ಇಲಾಖೆ ಯಿಂದ ಮಾರ್ಗಸೂಚಿ ಬಿಡುಗಡೆ

ಶೇರ್ ಮಾಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 2022-23ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸಲು ಅನುಮತಿ ನೀಡಿ ಆದೇಶವನ್ನು ಹೊರಡಿಸಿದೆ. ಇದರ ಜೊತೆಗೆ ವಾರ್ಷಿಕ ಪರೀಕ್ಷೆ /ಮೌಲ್ಯಾಂಕನ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ.
ಪ್ರಸಕ್ತ ಸಾಲಿನಿಂದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಹಕ್ಕು ಕಾಯಿದೆ (ಆಟಿಐ) ಪ್ರಕಾರ ಎಂಟನೇ ತರಗತಿಯವರೆಗೆ ಮಕ್ಕಳನ್ನು ಅನುತೀರ್ಣ ಮಾಡುವಂತಿಲ್ಲ ಎಂಬ ನಿಯಮವಿದೆ. ಒಂಬತ್ತನೇ ತರಗತಿಯಲ್ಲಿ ಮಾತ್ರ ಫೇಲ್ ಮಾಡಲು ಅವಕಾಶವಿದೆ.
ಪ್ರಸಕ್ತ ವರ್ಷದಲ್ಲಿ ಅರ್ಧ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಈಗಾಗಲೇ FA-1, FA-2 ಮತ್ತು SA-1 ಪರೀಕ್ಷೆಗಳು ನಡೆದು ಮೌಲ್ಯಾಂಕನವಾಗಿದ್ದು, SATS ನಲ್ಲಿ ಪ್ರಗತಿ ದಾಖಲಿಸಲಾಗಿರುತ್ತದೆ. ಆದ್ದರಿಂದ ಈ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪರೀಕ್ಷೆ ನಿರ್ವಹಿಸುವ ಬದಲಾಗಿ ಉಳಿದ ಅರ್ಧ ವರ್ಷಕ್ಕೆ ಸೀಮಿತಗೊಳಿಸಿ ಸಾಂಕೇತಿಕವಾಗಿ ನವೆಂಬರ್ -2022 ರಿಂದ ಮಾರ್ಚ್‌-2023ರ ಮೊದಲನೇ ವಾರದ ಒಳಗೆ ನಿರ್ವಹಿಸಿದ ಪಠ್ಯವಸ್ತುವನ್ನು ಆಧರಿಸಿ, ಸಂಕಲನಾತ್ಮಕ ಪರೀಕ್ಷೆ-2 ನಿರ್ವಹಿಸಲಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.
ಪ್ರತಿ ಶಾಲೆಯು SATS ಪ್ರಕಾರ ದಾಖಲಾಗಿರುವ ರಾಜ್ಯ ಪಠ್ಯಕ್ರಮದ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರು SATSನಲ್ಲಿ ನೋಂದಾಯಿಸಿದಂತೆ ದೃಢೀಕರಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ವಿದ್ಯಾರ್ಥಿಗಳ ಪಟ್ಟಿ ಸಲ್ಲಿಸುವುದು. ಅದರ ಆಧಾರದ ಮೇಲೆ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವುದು.
2022-23ನೇ ಸಾಲಿನ ಪರೀಕ್ಷೆ ಮತ್ತು ನಿರ್ವಹಣಾ ವೆಚ್ಚವನ್ನು ವಿದ್ಯಾರ್ಥಿಗಳಿಂದ ಪಡೆಯದೆ. ಸಂಪೂರ್ಣವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಭರಿಸಲು ಸರ್ಕಾರ ಆದೇಶಿಸಿದೆ.
ಶಾಲಾವಾರು ಮಕ್ಕಳ ಸಂಖ್ಯೆಯನ್ನಾಧರಿಸಿ 5ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ಹಾಗೂ 8ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 50 ಮಕ್ಕಳು ಇರುವಂತೆ ಆಯಾ ಕಿರಿಯ / ಹಿರಿಯ ಪ್ರಾಥಮಿಕ / ಪ್ರೌಢಶಾಲೆಗಳಲ್ಲಿ ಸ್ಥಾಪಿಸುವುದು.
ಪರೀಕ್ಷೆ ನಡೆಸಲು ಬೇಕಾದ ಅವಶ್ಯಕ ಮೂಲ ಸೌಕರ್ಯಗಳನ್ನು ಆಯಾ ಪರೀಕ್ಷಾ ಕೇಂದ್ರದ ಶಾಲೆಯವರು ನಿರ್ವಹಿಸುವುದು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನಾಗಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ಹಾಗು ಕೊಠಡಿಯ ಮೇಲ್ವಿಚಾರಕರನ್ನಾಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಶಿಕ್ಷಕರನ್ನು ಬದಲಾಯಿಸಿ ನೀಯೋಜನೆ ಮಾಡುವುದು.
SATS ನಲ್ಲಿ ನೋಂದಣಿಯಾಗಿರುವ 5 ಮತ್ತು 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಶಾಲಾ ಹಂತದಲ್ಲಿ ಮುಖ್ಯೋಪಾಧ್ಯಾಯರು ಆನ್‌ಲೈನ್‌ನಲ್ಲಿ ಮಾಹಿತಿ ಪಡೆದು ನಂತರ ಪರಿಶೀಲಿಸಿ ಪ್ರವೇಶ ಪತ್ರ ಮುದ್ರಿಸಿ ವಿತರಣೆ ಮಾಡುವುದು.

Leave a Reply

error: Content is protected !!