ಧರ್ಮಸ್ಥಳದ ನವೀಕೃತ ಸ್ನಾನಘಟ್ಟ ಉದ್ಘಾಟಿಸಿದ ಸಚಿವ ಆನಂದ್ ಸಿಂಗ್

ಶೇರ್ ಮಾಡಿ

ಬೆಳ್ತಂಗಡಿ: 480 ಲಕ್ಷ ರೂ. ಅನುದಾನದಡಿ ನಿರ್ಮಾಣವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ನದಿಯ ನವೀಕೃತ ಸ್ನಾನಘಟ್ಟವನ್ನು ಡಿ.17 ರಂದು ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ ಸಿಂಗ್ ಉದ್ಘಾಟಿಸಿದರು.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ತೀರ್ಥ ಮತ್ತು ಕ್ಷೇತ್ರ ಎರಡು ಮುಖ್ಯ. ನೇತ್ರಾವತಿ ಪವಿತ್ರ್ಯತೆಯನ್ನು ಉಳಿಸಬೇಕಾಗಿದೆ. ಅದಕ್ಕಾಗಿ ಸ್ವಚ್ಛತೆಗೆ ಆಧ್ಯತೆ ನೀಡಲಾಗಿದೆ. ಕ್ಷೇತ್ರದ ಪಾವಿತ್ರ್ಯ ರಕ್ಷಣೆ ದೃಷ್ಟಿಯಿಂದ ದೇವಳದ ಸನ್ನಿಧಿ ಸುತ್ತ ಒಂದುವರೆ ಕಿ.ಮೀ. ವ್ಯಾಪ್ತಿಯಲ್ಲಿ ಖಾಸಗಿ ಕಟ್ಟಡ, ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಬಾರದು ಎಂದು ಸಚಿವರು ಹಾಗೂ ಜಿಲ್ಲಾಧಿಕಾರಿ ಬಳಿ ಬೇಡಿಕೆ ಮುಂದಿಟ್ಟರು.

ಡಿ.ಹರ್ಷೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ದ.ಕ.ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಜನಾರ್ದನ್, ಉಪ ನಿರ್ದೇಶಕ ಎನ್.ಮಾಣಿಕ್ಯ, ಕಾರ್ಯಪಾಲಕ ಎಂಜಿನಿಯರ್ ಯಶವಂತ್ ಕುಮಾರ್ ಎಸ್., ಉಪಸ್ಥಿತರಿದ್ದರು.
ಮಂಗಳೂರು ಹೆದ್ದಾರಿ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್ ಅಜಿಲ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!