ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಕ್ಷಕ – ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಶೇರ್ ಮಾಡಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಮಹಾವಿದ್ಯಾಲಯದ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನುರಾಜೇಶ್. ಇ, ಅಧ್ಯಕ್ಷ ರಾಜು, ರಕ್ಷಕ-ಶಿಕ್ಷಕ ಸಂಘ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಟಿ. ನಾರಾಯಣ ಭಟ್ ರಾಮಕುಂಜ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಉಪಸ್ಥಿತರಿದ್ದರು. ದೇವಳದ ಆಡಳಿತ ಮಂಡಳಿಯ ಪ್ರತಿನಿಧಿಯಾಗಿ ಶಿವಸುಬ್ರಹ್ಮಣ್ಯ ಭಟ್, ಮಹಾವಿದ್ಯಾಲಯ ದ ಪ್ರಾಂಶುಪಾಲರಾದ ಡಾ.ದಿನೇಶ್ ಟಿ.ಟಿ, ಆಂತರಿಕ ಗುಣಮಟ್ಟ ಭರವಸ ಕೋಶ ದ ಸಂಯೋಜಕರಾದ ಡಾ.ಗೋವಿಂದ ಎನ್.ಯಸ್ ಮತ್ತು ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನೂತನ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ. ಟಿ ಸ್ವಾಗತಿಸಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ್ ಎನ್ ವಂದಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!