ಶಂಭೂರಿನ‌ ಬೊಂಡಾಲ ಜಗನ್ನಾಥ ಶೆಟ್ಟಿ ಪ್ರೌಢಶಾಲೆಯ ವಾರ್ಷಿಕೋತ್ಸವ

ಶೇರ್ ಮಾಡಿ

ಶಂಭೂರು: ಗ್ರಾಮೀಣ ಪ್ರದೇಶದಲ್ಲಿ ಸರ್ವ ರೀತಿಯ ಸೌಲಭ್ಯ ಹೊಂದಿರುವ, ಗುಣಮಟ್ಟದ ಶಿಕ್ಷಣ ನೀಡುವ ಇಂತಹ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಮುನ್ನಡೆಸುತ್ತಿರುವುದು ಶ್ಲಾಘನೀಯ. ಊರವರೆಲ್ಲರ ಸಹಕಾರದಿಂದ ಶಾಲೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.
ಅವರು ಶಂಭೂರಿನ‌ ಬೊಂಡಾಲ ಜಗನ್ನಾಥ ಶೆಟ್ಟಿ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸರಪಾಡಿ ಅಶೋಕ್ ಶೆಟ್ಟಿ ಹಾಗು ನಿವೃತ್ತ ಶಿಕ್ಷಕ ನಾರಾಯಣ ಗೌಡರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯನ್ನು ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸಿ ಹತ್ತು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರನ್ನು ಯುವ ಸಂಗಮ ಯುವಕ ಮಂಡಲ ಹಾಗು ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಆಶ್ರಯದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ, ಯುವ ಸಂಗಮದ ಕಾರ್ಯದರ್ಶಿ ಕೇಶವ ನಾಯ್ಕ್, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಸುಧೀರ್ ನಿರ್ಮಾಲ್ ಉಪಸ್ಥಿತರಿದ್ದರು.
ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ, ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply

error: Content is protected !!