ರಾಡಿ: ಡಿ.7ರಂದು ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ದನವನ್ನು ಕೊಂದು ಅದರ ಮಾಂಸವನ್ನು ಮಾರಾಟ ಮಾಡಿ ರುಂಡದ ಭಾಗ ಮತ್ತು ಕಾಲನ್ನು ಅಲ್ಲೇ ಗುಡ್ಡದಲ್ಲಿ ಬಿಸಾಡಿ ಹೋಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಖಚಿತ ಮಾಹಿತಿಯ ಮೇರೆಗೆ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಸನೋಜ್(38) ನನ್ನು ಡಿ.23 ರಂದು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಪ್ರಕರಣದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಈ ಹಿಂದೆಯೂ ಈತ ರಬ್ಬರ್ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉಪ್ಪಿನಂಗಡಿ ಠಾಣಾಧಿಕಾರಿ ರಾಜೇಶ್, ನೆಲ್ಯಾಡಿ ಹೊರಠಾಣಾ ಸಿಬ್ಬಂದಿಗಳಾದ ಬಾಲಕೃಷ್ಣ, ಕುಶಾಲಪ್ಪ, ಪ್ರತಾಪ್ ಸಹಕರಿಸಿದರು.