ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ‘ಪರೀಕ್ಷಾ ಪೆ ಚರ್ಚಾ’ ಸಂವಾದಕ್ಕೆ ಆಯ್ಕೆ

ಶೇರ್ ಮಾಡಿ

ಪುತ್ತೂರು: ಜ.27 ರಂದು ನವದೆಹಲಿಯಲ್ಲಿ ನಡೆಯಲಿರುವ ‘ಪರೀಕ್ಷಾ ಪೆ ಚರ್ಚಾ’ ಸಂವಾದದಲ್ಲಿ ಮಾನ್ಯ ಪ್ರಧಾನಮಂತ್ರಿಯವರೊಂದಿಗೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ(ಎಸ್.ಹರೀಶ್ ಹೊಳ್ಳ ಮತ್ತು ಡಾ.ವಿದೂಷಿ ಸುಚಿತ್ರಾ ಹೊಳ್ಳ ಇವರ ಪುತ್ರ) ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿಗಳೊಂದಿಗೆ ನಡೆಯಲಿರುವ ಪರೀಕ್ಷಾ ಪೇ ಚರ್ಚೆಯಲ್ಲಿ ಕರ್ನಾಟಕದಿಂದ ಒಟ್ಟು 4 ವಿದ್ಯಾರ್ಥಿಗಳು ಭಾಗವಹಿಸಲಿರುವರು.

ಇವರು ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ನಲ್ಲೂ ಭಾಗವಹಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಕೀರ್ತಿ ತರುವಂತಹ ಕಾರ್ಯಕ್ರಮದಲ್ಲಿ ತಾಲೂಕಿನಿಂದ ಭಾಗವಹಿಸುವ ಏಕೈಕ ವಿದ್ಯಾರ್ಥಿಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದ ಶುಭ ಹಾರೈಸಿರುತ್ತಾರೆ.

Leave a Reply

error: Content is protected !!