ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಗೆ ಡಾ.ಅನುರಾಧಾ ಕುರುಂಜಿ ಆಯ್ಕೆ

ಶೇರ್ ಮಾಡಿ

ಸುಳ್ಯ: ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಸುಳ್ಯದ ಲೇಖಕಿ, ಕವಯಿತ್ರಿ ಡಾ.ಅನುರಾಧಾ ಕುರುಂಜಿ ಯವರು ಆಯ್ಕೆಯಾಗಿದ್ದಾರೆ.

ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2023ರ ಹಂಪಿ ಉತ್ಸವವು ಜನವರಿ 27ರಿಂದ 29 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದ್ದು, ಉತ್ಸವದ ಪ್ರಯುಕ್ತ ನಡೆಯಲಿರುವ ಕವಿಗೋಷ್ಠಿಯಲ್ಲಿ‌ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಲಿದ್ದಾರೆ. ಈಗಾಗಲೇ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ, ಕಾಸರಗೋಡು ಜಿಲ್ಲಾ ಹಾಗೂ ಕೇರಳ ರಾಜ್ಯ ಮಟ್ಟದ ಕವಿಗೋಷ್ಠಿಗಳಲ್ಲಿ ಕವನ ವಾಚಿಸಿರುವ ಇವರು ಕುರುಂಜಿ ಪದ್ಮಯಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ, ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Leave a Reply

error: Content is protected !!