





ಪಟ್ಟೂರು: ರಥ ಸಪ್ತಮಿ ದಿನಾಚರಣೆ ಪ್ರಯುಕ್ತ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.

ವಿಶಾಲವಾದ ಮೈದಾನದಲ್ಲಿ ಸೂರ್ಯ ನಮಸ್ಕಾರ ಮಾಡಿದ ಬಳಿಕ ಶಾಲೆಯ ವೇದವ್ಯಾಸ ಧ್ಯಾನ ಮಂಟಪದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ರಥಸಪ್ತಮಿಯ ಹಾಗೂ ಸೂರ್ಯ ನಮಸ್ಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭ ವಿದ್ಯಾಸಂಸ್ಥೆಯ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ದೇರಾಜೆ ಉಪಸ್ಥಿತರಿದ್ದರು.