ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ

ಶೇರ್ ಮಾಡಿ

ಶಂಭೂರು: ಕರೋನಾ ಮಹಾಮಾರಿಯಿಂದಾಗಿ ಮಕ್ಕಳ ಕಲಿಕೆಯಲ್ಲಿ ಉಂಟಾದ ಅಡೆತಡೆಗಳಿಗೆ ಪರಿಹಾರವಾಗಿ ಜಾರಿಗೊಳಿಸಿದ ಕಲಿಕಾ ಚೇತರಿಕೆಗೆ ಪೂರಕವಾಗಿ ರಾಜ್ಯಾದ್ಯಂತ ಕಲಿಕಾ ಹಬ್ಬವನ್ನು ಜಾರಿಗೊಳಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ದ ದಕ್ಷಿಣ ಕನ್ನಡ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಶ್ರೀಮತಿ ಮಂಜುಳಾರವರು ಹೇಳಿದರು.

ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ -ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಾಳ್ತಿಲ ಇವುಗಳ ಆಶ್ರಯದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ನಲ್ಲಿ ನಡೆದ ಬಾಳ್ತಿಲ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ರವರು ಮಕ್ಕಳು ಆಸಕ್ತಿಯಿಂದ ಸ್ವ ಪ್ರೇರಣೆಯಿಂದ ಕಲಿಕೆಯಲ್ಲಿ ತೊಡಗಲು ಕಲಿಕಾ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ನಡೆದ ಮೆರಣಿಗೆಗೆ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಿರಣ್ಮಯಿ ಮತ್ತು ನರಿಕೊಂಬು ಪಂಚಾಯತ್ ಸದಸ್ಯರಾದ ಸಂತೋಷ್ ಚಾಲನೆ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ವಹಿಸಿ ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಸಹಾಯವಾಗುವ ಇಂತಹ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಉಷಾ ರಮಾನಾಥ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್, ಸರಕಾರಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಸಂತೋಷ್ ಕುಮಾರ್, ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷರಾದ ಸೀತಾ, ಯುವ ಸಂಗಮ ಸೇವಾ ಟ್ರಸ್ಟ್ ನ ಯಶೋಧರ ಕೊಲ್ಲೂರು, ವಿವಿಧ ಶಾಲೆಗಳ ಶಿಕ್ಷಕರಕ್ಷಕ ಸಂಘದ ಸದಸ್ಯರು. ಮುಖ್ಯಶಿಕ್ಷಕರು, ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳಾದ ವಸಂತಿ, ಪ್ರಕಾಶ್, ಶೋಭಾ, ದಯಾವತಿ, ಚೇತನಾ ಕುಮಾರಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ಪ್ರಸ್ತಾವಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ 9 ಶಾಲೆಗಳ 122 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

error: Content is protected !!