ಪ್ರಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ ವಿಧಿವಶ

ಶೇರ್ ಮಾಡಿ

ಚೆನ್ನೈ : ಹಲವು ಭಾಷೆಗಳಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಪ್ರಖ್ಯಾತ ಹಿರಿಯ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ ಅವರು ಫೆಬ್ರವರಿ 4 ರಂದು ನಿಧನ ಹೊಂದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ಅವರ ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.
ಹೆಸರಾಂತ ಗಾಯಕಿ ಐದು ದಶಕಗಳ ಕಾಲದ ವೃತ್ತಿಜೀವನದಲ್ಲಿ, ತಮಿಳು, ಹಿಂದಿ, ತೆಲುಗು, ಮಲಯಾಳಂ, ಅಸ್ಸಾಮಿ ಮತ್ತು ಬೆಂಗಾಲಿ ಸೇರಿದಂತೆ ಹಲವು ಭಾಷೆಗಳಾದ್ಯಂತ ಸಾವಿರಾರು ಹಾಡುಗಳಿಗೆ ಧ್ವನಿಯಾಗಿದ್ದರು.
ವಾಣಿ ಜೈರಾಮ್ ಅವರು ಇತ್ತೀಚೆಗೆ ವೃತ್ತಿಪರ ಗಾಯಕಿಯಾಗಿ 50 ವರ್ಷಗಳನ್ನು ಪೂರೈಸಿದ್ದರು ಮತ್ತು 10,000 ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರು ಇಳಯರಾಜ, ಆರ್‌ಡಿ ಬರ್ಮನ್, ಕೆ ವಿ ಮಹದೇವನ್, ಓಪಿ ನಯ್ಯರ್ ಮತ್ತು ಮದನ್ ಮೋಹನ್ ಸೇರಿದಂತೆ ಇತರ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಅವರಿಗೆ ಅತ್ಯುನ್ನತ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.

Leave a Reply

error: Content is protected !!