ಚತುಷ್ಪತ ರಸ್ತೆ ಕಾಮಗಾರಿಯ ಅತಿಯಾದ ಧೂಳಿನಿಂದ ವಿದ್ಯಾರ್ಥಿಗಳು ಅಸ್ವಸ್ಥತೆ; ಅಧಿಕಾರಿಗಳ ಕಛೇರಿಗೆ ಮುತ್ತಿಗೆ

ಶೇರ್ ಮಾಡಿ

ಉದನೆ: ಚತುಷ್ಪತ ರಸ್ತೆ ಕಾಮಗಾರಿಯಿಂದ ಉಂಟಾಗುತ್ತಿರುವ ಅತಿಯಾದ ಧೂಳಿನಿಂದ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕೆಮ್ಮು, ವಾಂತಿ, ಜ್ವರ, ಅಲರ್ಜಿ ಮುಂತಾದ ಖಾಯಿಲೆಗಳಿಗೆ ತುತ್ತಾಗುತ್ತಿದ್ದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ರಸ್ತೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳದೇ ಇದ್ದುದರಿಂದ ಫೆ.9 ರಂದು ಶಿರಾಡಿಯಲ್ಲಿರುವ ರಸ್ತೆ ಅಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು. ಮುಂದೇನಾದರೂ ನಿರ್ಲಕ್ಷ್ಯ ತೋರಿದರೆ ರಸ್ತೆ ತಡೆದು ಪ್ರತಿಭಟಿಸುವ ಎಚ್ಚರಿಕೆಯನ್ನೂ ನೀಡಲಾಯಿತು.

ಸಮಸ್ಯೆಯನ್ನು ಆಲಿಸಿದ ಅಧಿಕಾರಿಗಳು ನಾಳೆಯಿಂದ ಉದನೆ ಪೇಟೆ ಹಾಗೂ ಶಾಲಾ ವಠಾರದಲ್ಲಿ ಧೂಳು ಬರದಂತೆ ಆಗಾಗ್ಗೆ ನೀರು ಸಿಂಪಡಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಗೌಡ ಎಸ್, ಶಿರಾಡಿ ಗ್ರಾ.ಪಂಚಾಯತ್ ಸದಸ್ಯರಾದ ಕಾರ್ತಿಕೇಯನ್ ಶಾಲಾ ಮುಖ್ಯಗುರುಗಳು, ಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ಉದನೆ, ಶಿರಾಡಿ ವ್ಯಾಪಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!